ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ಪಶ್ಚಿಮ ಪದವೀಧರರ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಪದವೀಧರರ ಹೆಸರನ್ನು ನೋಂದಾಯಿಸುವ ಹಾಗೂ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡುವ ಕುರಿತು ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನ. 20ರಂದು ಸಂಜೆ 4.30ಕ್ಕೆ ಸಭೆ ಜರುಗಲಿದೆ.
ಗದಗ ಜಿಲ್ಲಾ ಮೂಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಗದಗ-ಬೆಟಗೇರಿ ನಗರ ಹಾಗೂ ಮುಳಗುಂದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮಾಜಿ ಜಿ.ಪಂ & ತಾ.ಪಂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್.ಸಿ-ಎಸ್.ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ, ಸಾಮಾಜಿಕ ಜಾಲತಾಣ, ಮಾಜಿ ಸೈನಿಕರ ವಿಭಾಗ, ಮೀನುಗಾರರ ವಿಭಾಗ, ಕಾರ್ಮಿಕರ ವಿಭಾಗ, ಅಸಂಘಟಿತ ಕಾರ್ಮಿಕರ ವಿಭಾಗ, ಐ.ಎನ್.ಟಿ.ಯು.ಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ ಮತ್ತು ಖೇತ್ ಮಜದೂರ ವಿಭಾಗ, ವೈದ್ಯರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರಿಫಾರ್ಮ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆಯ ವಿಭಾಗಗಳ ಅಧ್ಯಕ್ಷರು ಮತ್ತು ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಮತ್ತು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಅಶೋಕ ಮಂದಾಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ನೇತೃತ್ವದಲ್ಲಿ ಜರುಗುವ ಸಭೆಯಲ್ಲಿ ಗದಗ-ಬೆಟಗೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪುರ ಅಧ್ಯಕ್ಷತೆ ವಹಿಸುವರು.


