ಗದಗ: ಗದುಗಿನ ಶ್ರೀ ಪಂ.ಪಂಚಾಕ್ಷರಿ ಗವಾಯಿಗಳವರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ (ಎ.ಪಿ.ಎಂ.ಸಿ ಯಾರ್ಡ್) ದಲಾಲ ವರ್ತಕರ ಹಾಗೂ ಖರೀದಿದಾರರ ಸಂಘದ ಶ್ರೀ ಗಜಾನನೋತ್ಸವದ ಅಂಗವಾಗಿ 7ನೇ ದಿನವಾದ ಮಂಗಳವಾರ ಬೆಳಿಗ್ಗೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 25ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಗದಗ ಬಸವೇಶ್ವರ ಬ್ಲಡ್ ಬ್ಯಾಂಕ್ ಸಿಬ್ಬಂದಿಗಳಿಂದ ರಕ್ತ ಸಂಗ್ತಹಿಸಲಾಯಿತು. ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ ದಲಾಲ ವರ್ತಕರ ಸಂಘ ಹಾಗೂ ಖರೀದಾರರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
Trending Now



