HomeKarnataka Newsಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸ ಮಾಡಿಕೊಂಡಿದ್ದ ಬಿಜೆಪಿಗೆ ಅಭಿವೃದ್ಧಿ ಕಂಡು ತಳಮಳ: ಪ್ರಿಯಾಂಕ್ ಖರ್ಗೆ

ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸ ಮಾಡಿಕೊಂಡಿದ್ದ ಬಿಜೆಪಿಗೆ ಅಭಿವೃದ್ಧಿ ಕಂಡು ತಳಮಳ: ಪ್ರಿಯಾಂಕ್ ಖರ್ಗೆ

For Dai;y Updates Join Our whatsapp Group

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಹಾಗೂ ಕರಾವಳಿ ಭಾಗಕ್ಕೆ ಘೋಷಿಸಲಾದ ಅಭಿವೃದ್ಧಿ ಯೋಜನೆಗಳ ಕುರಿತು ಬಿಜೆಪಿ ನಾಯಕರ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮಂಗಳೂರು ಕ್ಯಾಬಿನೆಟ್‌ ಅನ್ನು ‘ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್’ ಎಂದು ಬಿಜೆಪಿ ನಾಯಕರು ಟೀಕಿಸಿರುವುದು ಹತಾಶೆಯ ಹೇಳಿಕೆ ಎಂದು ಅವರು ಎಕ್ಸ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿಪರ ನಿಲುವುಗಳನ್ನು ನೋಡಿ ತಳಮಳ ಶುರುವಾಗಿದೆ” ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬಿಜೆಪಿ ಕರಾವಳಿ ಭಾಗವನ್ನು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಕರಾವಳಿಯನ್ನು ಕೇವಲ ಮತಬ್ಯಾಂಕ್‌ ಪ್ರದೇಶವಾಗಿ ನೋಡುತ್ತದೆ. ಆದರೆ ನಾವು ಕರಾವಳಿಯಲ್ಲಿರುವ ಅಭಿವೃದ್ಧಿ ಮತ್ತು ಪ್ರಗತಿಯ ಸಾಧ್ಯತೆಗಳನ್ನು ನೋಡುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರು ಕರಾವಳಿಗೆ ಬಂದಾಗ ‘ಹೊಡಿ, ಬಡಿ’ ಎಂಬ ಪ್ರಚೋದನಕಾರಿ ಭಾಷಣಗಳನ್ನು ಮಾಡುವುದಕ್ಕೆ ಮಾತ್ರ ಸೀಮಿತರಾಗಿದ್ದರು ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ಸರ್ಕಾರ ಕರಾವಳಿಗರ ಆತ್ಮಗೌರವವನ್ನು ಗೌರವಿಸುವ ಉದ್ದೇಶದಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಸೇರಿದಂತೆ ವಿವಿಧ ಭಾಗಗಳಿಗೆ ಸಂಬಂಧಿಸಿದಂತೆ ಒಟ್ಟು ₹32,611 ಕೋಟಿ ಮೊತ್ತದ ಯೋಜನೆಗಳು ಮತ್ತು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಪ್ರವಾಸೋದ್ಯಮ, ಬಂದರು, ರಸ್ತೆ, ಆರೋಗ್ಯ, ಶಿಕ್ಷಣ, ನೀರು ಸರಬರಾಜು ಹಾಗೂ ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಇದರಲ್ಲಿ ಸೇರಿವೆ.

ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ, “ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಘೋಷಣೆ ಐತಿಹಾಸಿಕವಾದುದು” ಎಂದು ಹೇಳಿದ್ದಾರೆ.

“ಕರಾವಳಿಯನ್ನು ಮತಬ್ಯಾಂಕ್ ಮಾಡಿಕೊಂಡಿದ್ದ ಬಿಜೆಪಿಗೆ ಇಂತಹ ಅಭಿವೃದ್ಧಿಪರ ನಿಲುವು ತಳೆಯಲು ಸಾಧ್ಯವಾಗಲಿಲ್ಲ ಏಕೆ?” ಎಂದು ಪ್ರಶ್ನಿಸಿರುವ ಅವರು, ಜನರು ಕೋಮು ವಿಚಾರಗಳನ್ನು ಬದಿಗಿಟ್ಟು ಪ್ರಗತಿಯ ವಿಚಾರಗಳತ್ತ ಚಿಂತನೆ ಆರಂಭಿಸಿರುವುದೇ ಬಿಜೆಪಿಗೆ ಅಸ್ತಿತ್ವದ ಭಯ ಕಾಡಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಕರಾವಳಿ ಭಾಗದಲ್ಲಿ ಡೇಟಾ ಸೆಂಟರ್, ವಾಟರ್ ಮೆಟ್ರೋ, ಪ್ರವಾಸೋದ್ಯಮ, ಮರೀನ್ ಬಯೋಟೆಕ್ ಮತ್ತು ಮಾಹಿತಿ ತಂತ್ರಜ್ಞಾನ ಸೇರಿದಂತೆ ಅಭಿವೃದ್ಧಿ ಆಧಾರಿತ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗಕ್ಕೆ ₹16,000 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಪ್ಯಾಕೇಜ್‌ ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ಅನುಮೋದನೆ ದೊರೆತಿದೆ.

“ಕೋಮು ಪ್ರಚೋದನೆ ಮತ್ತು ರಕ್ತ ಕಣ್ಣೀರು ಇವೆರಡನ್ನೂ ಹೊರತುಪಡಿಸಿದರೆ ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ” ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರು ಕ್ಯಾಬಿನೆಟ್‌ ಅನ್ನು ಬಿಜೆಪಿ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, ಅಭಿವೃದ್ಧಿ ಕಾರ್ಯಗಳನ್ನೂ ರಾಜಕೀಯ ದೃಷ್ಟಿಯಿಂದ ನೋಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರ ಜನರ ಸಮಸ್ಯೆಗಳನ್ನು ಆಲಿಸಿ, ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img