HomeCrime Newsಹೊಸಕೋಟೆಯಲ್ಲಿ ಬೆಳ್ಳಂಬೆಳಿಗ್ಗೆ ರಕ್ತಪಾತ: ಮನೆ ಮುಂದೆಯೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಹೊಸಕೋಟೆಯಲ್ಲಿ ಬೆಳ್ಳಂಬೆಳಿಗ್ಗೆ ರಕ್ತಪಾತ: ಮನೆ ಮುಂದೆಯೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

For Dai;y Updates Join Our whatsapp Group

Spread the love

ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ದಬ್ಬಗುಂಠಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಭೀಕರ ಕೊಲೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮುಂಜಾನೆ ಸುಮಾರು 4:30ರ ಸಮಯದಲ್ಲಿ ಮನೆ ಮುಂದೆಯೇ ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು 40 ವರ್ಷದ ಶಿವಶಂಕರ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ನಿದ್ದೆಯಲ್ಲಿದ್ದ ವೇಳೆ ಶಿವಶಂಕರ್‌ಗೆ ಕರೆ ಬಂದಿದ್ದು, ಅವರು ಮನೆ ಹೊರಗೆ ತೆರಳಿದ ಬಳಿಕ ಮತ್ತೆ ಹಿಂದಿರುಗಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಳಿಕ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೊಲೆಗೈದ ದುಷ್ಕರ್ಮಿಗಳು ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದು, ಕೊಲೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ಕುರಿತು ಮಾಹಿತಿ ಪಡೆದ ಹೊಸಕೋಟೆ ಪೊಲೀಸರು ಹಾಗೂ SOCO ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!