ಬೆಂಗಳೂರು:- ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆ (ಬಿಎಂಐಸಿ) ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಸೇರಿಸಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಐಸಿ ಒಪ್ಪಂದವಾಗುವ ವೇಳೆ ತಾವು ಮುಖ್ಯಮಂತ್ರಿ ಆಗಿದ್ದೆ, ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಯೋಜನೆಗೆ ಹಣಕಾಸು ಇಲಾಖೆಯ ಅನುಮತಿಯೂ ಇದ್ದು, ಎಲ್ಲಾ ದಾಖಲೆಗಳ ಮಾಹಿತಿಯೂ ಸಿದ್ದರಾಮಯ್ಯ ಅವರಿಗೆ ತಿಳಿದಿದೆ. ಆದರೂ ಕೆಲ ರೈತರು ತಮ್ಮನ್ನೂ ಪಾರ್ಟಿ ಮಾಡಿರುವುದು ಬೇಸರ ತಂದಿದೆ ಎಂದು ಹೇಳಿದರು.
ಈ ಇಳಿ ವಯಸ್ಸಿನಲ್ಲೂ ವಕೀಲರಿಗೆ ಶುಲ್ಕ ನೀಡಿ ಕೋರ್ಟ್ನಲ್ಲಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.



