ಹೊಸ ವರ್ಷಕ್ಕೆ ಗುಡ್ ನ್ಯೂಸ್ ಕೊಟ್ಟ BMRCL: ರೈಲು ಸೇವೆ ಅವಧಿ ವಿಸ್ತರಣೆ!

0
Spread the love

ಬೆಂಗಳೂರು:- ಹೊಸ ವರ್ಷಕ್ಕೆ ಮೆಟ್ರೋ ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ಕೊಟ್ಟಿದ್ದು, ರೈಲು ಸೇವೆ ಅವಧಿ ವಿಸ್ತರಣೆ ಮಾಡಿದೆ.

Advertisement

2024 ಕಳೆದು 2025ರ ಹೊಸ ವರ್ಷಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಅಂದು ಸಿಟಿ ಮಂದಿ ಫುಲ್ ಎಂಜಾಯ್ ಮೂಡ್ ನಲ್ಲಿರಲಿದ್ದಾರೆ. ಅದರಲ್ಲೂ ಬ್ರಿಗೇಡ್ ರೋಡ್​ನಲ್ಲಿ ಹೊಸ ವರ್ಷದ ಆಚರಣೆಗೆ ಜನಜಾತ್ರೆಯೇ ತುಂಬಿರುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 31 ರ ಮಧ್ಯರಾತ್ರಿಯಿಂದ ತಡರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಲಾಗಿದೆ.

ರಾತ್ರಿ ಇಡೀ ಪಾರ್ಟಿ ಮಾಡಿ ಮನೆ ಸೇರಿಕೊಳ್ಳಲು ಪ್ರಯಾಣಿಕರ ಅನುಕೂಲಕ್ಕಾಗಿ ಸೇವೆ ಅವಧಿ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ. ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ರಾತ್ರಿ 11ರಿಂದ 10 ನಿಮಿಷಕ್ಕೊಂದು ರೈಲು ಸೇವೆ ಇರಲಿದ್ದು, ಜನವರಿ 1ರಂದು ಮುಂಜಾನೆ 2 ಗಂಟೆಗೆ ಎಲ್ಲ ಮೆಟ್ರೋ ಟರ್ಮಿನಲ್​​ನಿಂದ ಕೊನೆ ರೈಲು ಹೊರಡಲಿದೆ. ಆದ್ರೆ, ಮೆಜೆಸ್ಟಿಕ್​ನಿಂದ ಮುಂಜಾನೆ 2.40ಕ್ಕೆ ಕೊನೆ ರೈಲು ಸಂಚರಿಸಲಿದೆ ಎಂದು ಬಿಎಂಆರ್​ಸಿಎಲ್ ಮಾಹಿತಿ ನೀಡಿದೆ.


Spread the love

LEAVE A REPLY

Please enter your comment!
Please enter your name here