ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: 10ಕ್ಕೂ ಹೆಚ್ಚು ಮಂದಿಗೆ ಗಾಯ.. ತಪ್ಪಿದ ದುರಂತ!

0
Spread the love

ಬೆಂಗಳೂರು:- ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಜರುಗಿದೆ.

Advertisement

ಮೆಟ್ರೊ ಪಿಲ್ಲರ್ 607 ಕ್ಕೆ BMTC ಬಸ್ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನೂ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here