BMW ಕಾರು ಬೈಕ್ʼ​​ಗೆ ಡಿಕ್ಕಿ: ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ಸ್ಥಳದಲ್ಲೇ ಸಾವು!

0
Spread the love

ನವದೆಹಲಿ: ಬೈಕ್​​ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ಮೃತಪಟ್ಟಿದ್ದಾರೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52) ಮೃತ ದುರ್ಧೈವಿಯಾಗಿದ್ದು,

Advertisement

ಅವರು ಮತ್ತು ಅವರ ಪತ್ನಿ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಮನೆಗೆ ಹಿಂತಿರುಗುತ್ತಿದ್ದಾಗ ರಿಂಗ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಳಿಕ ಟ್ಯಾಕ್ಸಿ ಮೂಲಕ ದಂಪತಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ನವಜೋತ್ ಸಿಂಗ್ ಅವರನ್ನು ಜಿಟಿಬಿ ನಗರದ ನ್ಯೂಲೈಫ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಅವರ ಪತ್ನಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.


Spread the love

LEAVE A REPLY

Please enter your comment!
Please enter your name here