ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ದುರ್ಘಟನೆ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವರು ನಾಪತ್ತೆಯಾಗಿದ್ದಾರೆ.
ಮಾಹಿತಿಯ ಪ್ರಕಾರ, ಪಂಜಾಬ್‌ನ ಲುಧಿಯಾನದಿಂದ ಬಂದ ಸುಮಾರು 25 ಭಕ್ತರು ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಲು ಬೋಟ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಯಮುನಾ ನದಿಯಲ್ಲಿ ಬೋಟ್ ಮಗುಚಿ ಈ ದುರಂತ ಸಂಭವಿಸಿದೆ.
ಘಟನೆಯ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಇದು ಅತ್ಯಂತ ದುಃಖದ ಮತ್ತು ಹೃದಯವಿದ್ರಾವಕ ಘಟನೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಅಧಿಕಾರಿಗಳಿಗೆ ತಕ್ಷಣ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ನಡೆಸುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.



