ತುಮಕೂರು: ಅಮಾನಿಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತುಮಕೂರು ನಗರದ ಕೋಡಿ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ. ಸುಮಾರು 35-40 ವರ್ಷ ಮಹಿಳೆ ಶವ ಪತ್ತೆಯಾಗಿದ್ದು, ಎರಡು ಮೂರು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದೆ.
Advertisement
ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ತುಮಕೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಮಹಿಳೆಯ ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ಸ್ಥಳಾಂತರ ಮಾಡಲಾಗಿದೆ.
ಮೃತ ಮಹಿಳೆಯ ಗುರುತು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.