ಮಂಡ್ಯ: ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ವೈದ್ಯನಾಥಪುರ ಗ್ರಾಮದ ಶಿಂಷಾ ನದಿ ಬಳಿ ನಡೆದಿದೆ. ಸುಮಾರು 25 ರಿಂದ 30 ವರ್ಷದ ಮಹಿಳೆಯ ಶವವಾಗಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಮಹಿಳೆ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆಯ ನಂತರವಷ್ಟೆ ತಿಳಿಯಬೇಕಿದೆ. ಇನ್ನೂ ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



