ಬೆಳಗಾವಿ:- ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜರುಗಿದೆ.
ಘಟನೆಯಲ್ಲಿ ಐವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31), ಸುದರ್ಶನ ಬನೋಶಿ(25) ಎಂದು ಗುರುತಿಸಲಾಗಿದೆ.
ಗ್ರಾಮದ ಹೊರವಲಯದಲ್ಲಿರುವ ವಿಕ್ರಮ ಇನಾಮದಾರ್ ಎನ್ನುವರಿಗೆ ಸೇರಿದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿಈ ದುರಂತ ಸಂಭವಿಸಿದ್ದು, ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಐವರು ಜನರನ್ನು ಝೀರೋ ಟ್ರಾಫಿಕ್ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕಾರ್ಖಾನೆಯ ನಂಬರ್ 1 ಕಂಪಾರ್ಟಮೆಂಟ್ ನಲ್ಲಿ ವಾಲ್ ರಿಪೇರಿ ಮಾಡೋ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಸದ್ಯ ಆಸ್ಪತ್ರೆಗೆ ಬೆಳಗಾವಿ ಎಸ್ಪಿ ಕೆ.ರಾಮರಾಜನ್, ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.



