ದಾವಣಗೆರೆ:– ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಉತ್ತರ ಭಾಗದಲ್ಲಿ ಮನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಜರುಗಿದೆ.
Advertisement
11 ವರ್ಷದ ಸ್ವೀಕೃತಿ ಮೃತ ಬಾಲಕಿ. ತೀರ್ಥಿಬಾಯಿ, ಹೂವಾ ನಾಯ್ಕ್, ಸುನೀತಾ ಬಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಬೆಳಗ್ಗೆ ಬಾಯ್ಲರ್ ಆನ್ ಮಾಡಿದಾಗ ಸ್ಟೋಟಗೊಂಡಿದೆ. ಬಾಯ್ಲರ್ ಪಕ್ಕದಲ್ಲೇ ಇದ್ದ ಬಾಲಕಿ ಸ್ವೀಕೃತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಗಂಭೀರವಾಗಿ ಸುಟ್ಟಗಾಯಗಳಾಗಿರುವ ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಇದೀಗ ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದಾರೆ.