ಸರಯೂ ನದಿಗೆ ಬಿದ್ದ ಬೊಲೆರೊ ಕಾರು: 11 ಮಂದಿ ಸಾವು, ನಾಲ್ವರು ಗಂಭೀರ!

0
Spread the love

ಲಕ್ನೋ:- ಇಲ್ಲಿನ ಉತ್ತರ ಪ್ರದೇಶದ ಗೊಂಡಾಯಲ್ಲಿ ಬೊಲೆರೊ ಕಾರು ಸರಯೂ ನದಿಗೆ ಬಿದ್ದು 11 ಜನರು ಮೃತಪಟ್ಟಿರುವ ಘಟನೆ ಜರುಗಿದೆ.

Advertisement

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಸಿಹಗಾಂವ್‌ನಿಂದ ಖರ್ಗುಪುರದ ಪೃಥ್ವಿನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹಾಗೂ ಪವಿತ್ರ ನೀರು ಅರ್ಪಿಸಲು ಬೊಲೆರೊ ಕಾರಿನಲ್ಲಿ ಹೊರಟಿದ್ದರು. ಬೆಲ್ವಾ ಬಹುತಾ ಬಳಿ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಚಾಲಕ ಸೇರಿದಂತೆ 15 ಜನರಿದ್ದ ಕಾರು ಸರಯೂ ನದಿಗೆ ಬಿದ್ದಿದೆ.

ಕಾರು ನದಿಗೆ ಬೀಳುತ್ತಿದ್ದಂತೆ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಆನಂತರ ಗ್ರಾಮಸ್ಥರು ಮತ್ತು ರಕ್ಷಣಾ ತಂಡದ ಸಹಾಯದಿಂದ 11 ಮೃತದೇಹಗಳನ್ನ ಹೊರತೆಗೆದಿದ್ದಾರೆ. ಇನ್ನುಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here