ಗದಗ: ಬೈಕ್‌ಗೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಾಯಗಳಾಗಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ನಡೆದಿದೆ.
Advertisement
ಪೌರ ಕಾರ್ಮಿಕ ನೀಲಪ್ಪ ದೊಡ್ಡಮನಿ (57) ಮೃತ ದುರ್ಧೈವಿಯಾಗಿದ್ದು, ಬೈಕ್ ಗೆ ಹಿಂಬದಿಯಿಂದ ಬುಲೆರೊ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ನಡೆದಿದೆ. ನಿನ್ನೆ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು,
ಹಿಂಬದಿಸವಾರ ಮಂಜುನಾಥ್ ಕರಿಗೊಳಪ್ಪನವರನಿಗೂ ಗಂಭೀರ ಗಾಯಗಳಾಗಿದ್ದು, ಗದಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದೀಗ ವೈರಲ್ ಆಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


