ಮಂಡ್ಯ: ಸ್ಕೂಟರ್ ಗೆ ಬೊಲೆರೊ ವಾಹನ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿರುವ ಘಟನೆ ಮಳವಳ್ಳಿ ಪಟ್ಟಣದ ಹೊರ ಹೊಲಯದ ಕೊಳ್ಳೆಗಾಲ ರಸ್ತೆಯ ಕಣಿಗಲ್ ಹಳ್ಳದ ಬಳಿ ನಡೆದಿದೆ.
ಕುಂದೂರು ಗ್ರಾಮದ ಶಿಲ್ಪ( 39) ಮೃತಪಟ್ಟವರಾಗಿದ್ದು, (7)ವರ್ಷದ ಅನನ್ಯ ಹಾಗೂ (5)ವರ್ಷದ ಮಾನ್ಯ ಗಾಯಗೊಂಡ ಮಕ್ಕಳಾಗಿದ್ದಾರೆ. ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ವೇಳೆ ವೇಗವಾಗಿ ಬರುತ್ತಿದ್ದ ಬೊಲೆರೊ ವಾಹನ ಸ್ಕೂಟರ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ತಲೆಗೆ ತೀವ್ರ ಪೆಟ್ಟು ಬಿದ್ದು ಶಿಲ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡ ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು,
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಮಹಿಳೆಯ ಶವ ಮಳವಳ್ಳಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.