ಬೆಂಗಳೂರು: ಇತ್ತೀಚೆಗೆ ಬಾಂಬ್ ಬೆದರಿಕೆ ಕೇಸ್ಗಳು ಹೆಚ್ಚಾಗುತ್ತಲೇ ಇದೆ. ದೆಹಲಿ, ಶಾಲಾ-ಕಾಲೇಜು, ಆಸ್ಪತ್ರೆ ಸೇರಿ ಹೀಗೆ ಬಾಂಬ್ ಬೆದರಿಕೆಗಳು ಬರುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನ ಚ್ಎಸ್ಬಿಸಿ ಬ್ಯಾಂಕ್ನ ಎಂಜಿ ರಸ್ತೆ ಶಾಖೆಯಲ್ಲಿ ಬಾಂಬ್ ಬೆದರಿಕೆ ಬಂದಿದೆ.
Advertisement
ಬ್ಯಾಂಕ್ನಲ್ಲಿ ಬಾಂಬ್ ಇಡಲಾಗಿದೆ ಎಂದು ಬದರಿಸುವ ಇಮೇಲ್ವೊಂದನ್ನು ಬ್ಯಾಂಕ್ಗೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಕಚೇರಿಯ ಎಲ್ಲಾ ಸಿಬ್ಬಂದಿ ಹಾಗು ಗ್ರಾಹಕರನ್ನು ಹೊರ ಕಳುಹಿಸಲಾಯಿತು. ಹಲಸೂರು ಠಾಣೆಯ ಪೊಲೀಸರು ಶೀಘ್ರದಲ್ಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿನ ಕೆಲವು ತಿಂಗಳುಗಳ ಹಿಂದೆ ಬೆಂಗಳೂರನ್ನು ಬೆಚ್ಚಿಬೀಳಿಸಿದ ಬೆದರಿಕೆ ಇಮೇಲ್‌ಗಳು ನಗರದ ಜನಪ್ರಿಯ ‘ರಾಮೇಶ್ವರನ ಕೆಫೆ’ಯಲ್ಲಿ ಸ್ಫೋಟ ಸಂಭವಿಸಿದ ಕೆಲವೇ ತಿಂಗಳುಗಳ ನಂತರ ಬಂದಿವೆ.