ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೋರ್ಟ್ ಆವರಣದಲ್ಲಿ ಬಾಂಬ್ ಇಟ್ಟಿರೋದಾಗಿ ಮೇಸೆಜ್ ಬಂದಿದ್ದು, ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು, ಡಾಗ್ ಸ್ಕ್ವಾಡ್ ಜೊತೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.
Advertisement
ಹೌದು ಸಿಟಿ ಸಿವಿಲ್ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದು, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು, ಡಾಗ್ ಸ್ಕ್ವಾಡ್ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಸದ್ಯಕ್ಕೆ ಯಾವುದೇ ಸ್ಪೋಟಕ ವಸ್ತುಗಳು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.
ಇದೊಂದು ಹುಸಿ ಸಂದೇಶ ಎಂದು ಪೊಲೀಸರು ಮಾಹಿತಿ ನೀಡಿದ್ದು, ಈ ಹಿಂದೆ ಬೇರೆ ಕಡೆಗಳಿಗೆ ಬಂದಿದ್ದ ಬೆದರಿಕೆ ಸಂದೇಶದಂತೆ ಈಗ ಕೋರ್ಟ್ ಗೂ ಬೆದರಿಕೆ ಸಂದೇಶ ಬಂದಿದೆ ಎಂದು ಹೇಳಿರುವುದಾಗಿ ವರದಿಯಾಗಿದೆ.