Breaking News: ಬೆಂಗಳೂರಿನ ಐಬಿಎಸ್ ಹೋಟೆಲ್​ಗೆ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ!

0
Spread the love

ಬೆಂಗಳೂರು:- ನಗರದ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿರುವ ಐಬಿಎಸ್ ಹೋಟೆಲ್ ಮೇಲ್ ಐಡಿಗೆ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

Advertisement

ಇದರಿಂದ ಹೋಟೆಲ್​ ಸಿಬ್ಬಂದಿ ಕೆಲ ಕಾಲ ಆತಂಕಗೊಂಡಿದ್ದು, ಕೂಡಲೇ ಸಂಪಂಗಿರಾಮನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳ ದೌಡಾಯಿಸಿ ಹೋಟೆಲ್​ನಲ್ಲಿದ್ದ ಎಲ್ಲರನ್ನೂ ಹೊರಗೆ ಕಳುಹಿಸಿ ತಪಾಸಣೆ ನಡೆಸಿದರು.

ಬಾಂಬ್ ಬೆದರಿಕೆ ಸಂದೇಶ ನೋಡಿ ಹೋಟೆಲ್ ಸಿಬ್ಬಂದಿ ಕೂಡಲೇ ಸಂಪಂಗಿರಾಮನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳ ಐಬಿಎಸ್ ಹೋಟೆಲ್​ನಲ್ಲಿ ತಪಾಸಣೆ ನಡೆಸಿದೆ. ಆದ್ರೆ, ಹೋಟೆಲ್​ನಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here