ನವದೆಹಲಿ: ಇತ್ತೀಚೆಗೆ ವಿಮಾನಗಳಿಗೆ, ಶಾಲೆಗಳಿಗೆ, ರೈಲ್ವೇ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿ ವರದಿ ಆಗುತ್ತಿದೆ. ಕಿಡಿಗೇಡಿಗಳು ಸುಖಾಸುಮ್ಮನೆ ಈ ರೀತಿ ಕರೆ ಅಥವಾ ಮೇಲ್ ಮಾಡಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.
ಅದರಂತೆ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ.
ಇದೀಗ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ ಎಂದು ವರದಿ ಆಗಿದೆ.



