Bengaluru: ಆರ್ಮಿ ಶಾಲೆಗೆ ಬಾಂಬ್ ಬೆದರಿಕೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ!

0
Spread the love

ಬೆಂಗಳೂರು:- ಸೈನಿಕ ಶಾಲೆಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಕರೆ ಮಾಡಿರುವ ಘಟನೆ ಬೆಂಗಳೂರಿನ ಅಶೋಕ್ ನಗರದಲ್ಲಿ ಜರುಗಿದೆ.

Advertisement

ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಆದ್ರೆ, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಆಶೋಕ ನಗರದ ಆರ್ಮಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಇಮೇಲ್‌ನಲ್ಲಿ ಬರೆಯಲಾಗಿದೆ. ಶಾಲೆಯ ಇ ಮೇಲ್ ಖಾತೆಗೆ ಬೆದರಿಕೆ ಮೇಲ್ ಬಂದಿದ್ದು, ಇದನ್ನು ನೋಡಿದ ಸಿಬ್ಬಂದಿ ಕೂಡಲೇ ಕ ಆಶೋಕ ನಗರ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸಮೇತ ಶಾಲೆಗೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಆದರೆ, ಪರಿಶೀಲನೆ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.

ಇದೊಂದು ಸುಳ್ಳು ಬೆದರಿಕೆ ಇ ಮೇಲ್ ಎಂಬುದು ಬೆಳಕಿಗೆ ಬಂದಿದೆ.


Spread the love

LEAVE A REPLY

Please enter your comment!
Please enter your name here