ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಮಾಡಿದ್ರು, ಇದೀಗ ಬೆಂಗಳೂರಿ ಮತ್ತೊಂದು ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.
Advertisement
ಕ್ರಿಸಲಿಸ್ ಹೈ ಶಾಲೆಗೆ ಬಾಂಬ್ ಬೆದರಿಕೆ ಸಂದೇಶವುಳ್ಳ ಇ-ಮೇಲ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಶಾಲಾ ಆಡಳಿತ ತಿಳಿಸಿದೆ. ಶಾಲೆಗೆ ವರ್ತೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ.
ಮೊನ್ನೆಯಷ್ಟೆ ಬೆಂಗಳೂರು ನಗರದಲ್ಲಿರುವ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಇಟ್ಟಿರೋದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿತ್ತು. RR ನಗರ, ಕೆಂಗೇರಿ ಸೇರಿದಂತೆ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿತ್ತು.