HomeKarnataka Newsಧಾರವಾಡ ಜಿಲ್ಲಾ ಕೋರ್ಟ್ʼಗೆ ಮತ್ತೆ ಬಾಂಬ್ ಬೆದರಿಕೆ: ವಾರದೊಳಗೆ 2ನೇ ಬಾರಿ ಆತಂಕ ಸೃಷ್ಟಿಸಿದ ದುಷ್ಕರ್ಮಿಗಳು

ಧಾರವಾಡ ಜಿಲ್ಲಾ ಕೋರ್ಟ್ʼಗೆ ಮತ್ತೆ ಬಾಂಬ್ ಬೆದರಿಕೆ: ವಾರದೊಳಗೆ 2ನೇ ಬಾರಿ ಆತಂಕ ಸೃಷ್ಟಿಸಿದ ದುಷ್ಕರ್ಮಿಗಳು

For Dai;y Updates Join Our whatsapp Group

Spread the love

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ವಾರದೊಳಗೆ ಎರಡನೇ ಬಾರಿ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಿಂದ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಜಿಲ್ಲಾ ನ್ಯಾಯಾಲಯದ ಆಡಳಿತ ಕಚೇರಿಗೆ ಬಂದಿರುವ ಇ-ಮೇಲ್‌ನಲ್ಲಿ ಕೋರ್ಟ್ ಹಾಗೂ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ಕಾರ್ಯಾಚರಣೆ ಆರಂಭಿಸಿದರು.

ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರನ್ನು ಕೋರ್ಟ್ ಆವರಣದಿಂದ ಹೊರಗೆ ತೆರಳುವಂತೆ ಸೂಚಿಸಲಾಯಿತು. ಬಳಿಕ ಪೊಲೀಸರು ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣದಲ್ಲಿ ಸಮಗ್ರ ತಪಾಸಣೆ ನಡೆಸಿದರು.

ಇದೇ ರೀತಿಯ ಬೆದರಿಕೆ ಸಂದೇಶ ಜೂನ್ 19ರಂದು ಕೂಡ ಧಾರವಾಡ ಜಿಲ್ಲಾ ನ್ಯಾಯಾಲಯದ ಆಡಳಿತ ಕಚೇರಿಗೆ ಬಂದಿತ್ತು. ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯದಲ್ಲಿ 23 ಸೈನೈಡ್ ಅನಿಲ ಗುಂಡುಗಳು ಸ್ಫೋಟಗೊಳ್ಳಲಿವೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಈ ಬೆದರಿಕೆ ಸಂದೇಶದಿಂದ ನ್ಯಾಯಾಲಯದ ಸುತ್ತಮುತ್ತ ಆತಂಕದ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಆಗಮಿಸಿದ್ದ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿತ್ತು. ಸದ್ಯ ಮತ್ತೊಮ್ಮೆ ಬಂದಿರುವ ಬೆದರಿಕೆ ಸಂದೇಶದ ಹಿನ್ನೆಲೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇ-ಮೇಲ್ ಕಳುಹಿಸಿದವರ ಪತ್ತೆಗೆ ಮುಂದಾಗಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!