ಬೆಂಗಳೂರು: 183 ಪ್ರಯಾಣಿಕರಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜರುಗಿದೆ.
ಕೂಡಲೇ ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.
ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್ಗೆ ಮಾಹಿತಿ ನೀಡಿದ ನಂತರ, ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ವಿಮಾನವು ನಂತರ ದೆಹಲಿಗೆ ಸುರಕ್ಷಿತವಾಗಿ ಪ್ರಯಾಣ ಮುಂದುವರಿಸಿದೆ.
ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.



