ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೇಂದ್ರ ಕಚೇರಿಗೆ ಬಾಂಬ್ ಇಡುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆದರಿಕೆ ಇ-ಮೇಲ್ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿದ್ದ ಸಂಜಯನಗರ ಪೊಲೀಸರು, ತಕ್ಷಣ ತನಿಖೆ ನಡೆಸಿ ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆತನನ್ನು ಬೆಂಗಳೂರಿಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಪೊಲೀಸರು ಆರೋಪಿಯ ಬಳಿಯಿದ್ದ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು, ಇದರ ನಿಖರತೆ ಕುರಿತು ಪರಿಶೀಲನೆ ನಡೆಯುತ್ತಿದೆ.
ಘಟನೆಯ ಹಿನ್ನೆಲೆಯಲ್ಲಿ ಇಸ್ರೋ ಆಡಳಿತಾಧಿಕಾರಿ ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



