ನವದೆಹಲಿ:- ದೆಹಲಿಯ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಬಂದಿದೆ.
Advertisement
ದಕ್ಷಿಣ ದೆಹಲಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಹಾಗೂ ವಾಯುವ್ಯ ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದ ಕ್ರೆಸೆಂಟ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಕೂಡಲೇ ಅಗ್ನಿಶಾಮಕ ದಳ, ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಆದರೆ ಇದುವರೆಗೆ ಯಾವುದೇ ರೀತಿಯ ಅನುಮಾನಾಸ್ಪದವಾದ್ದದ್ದು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ಕೊಟ್ಟಿದ್ದಾರೆ.
ಇನ್ನೂ ಕಳೆದ 9 ದಿನಗಳಲ್ಲಿ 5ನೇ ಬಾಂಬ್ ಬೆದರಿಕೆ ಇದಾಗಿದೆ ಎಂದು ತಿಳಿದು ಬಂದಿದೆ.