ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳರು ಕಮಿಷನರ್ ಸೀಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಆಡುಗೋಡಿಯ ಚೆನ್ನೇನಹಳ್ಳಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಸುಮಾರು 8ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾರೆ. ಮೂರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ.
ಇನ್ನೂ ಸ್ಫೋಟದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ರು. ಘಟನೆಯ ಬಗ್ಗೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ್ರು. ಇದೇ ವೇಳೆ ಮಾತಾಡಿದ ಸಿಎಂ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.