ಬೆಂಗಳೂರು: ಲಿವ್–ಇನ್ ಸಂಬಂಧದಲ್ಲಿದ್ದ ಯುವತಿಯನ್ನು ವೈಯರ್ನಿಂದ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ ನಡೆದಿದೆ.
ಮೃತ ಯುವತಿಯನ್ನು ಕೊಡಗು ಮೂಲದ ರಂಜಿತಾ (23) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಅಯ್ಯಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ರಂಜಿತಾ ಮತ್ತು ಅಯ್ಯಪ್ಪ ಇಬ್ಬರೂ ಕೆಲಕಾಲದಿಂದ ಲಿವ್–ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು. ಆದರೆ ಅಯ್ಯಪ್ಪ ಈಗಾಗಲೇ ವಿವಾಹಿತನಾಗಿದ್ದು, ಈ ವಿಷಯವನ್ನು ರಂಜಿತಾಗೆ ತಿಳಿಸಿರಲಿಲ್ಲ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಈ ವಿಷಯ ಯುವತಿಗೆ ತಿಳಿದ ಬಳಿಕ ಇಬ್ಬರ ನಡುವೆ ಜಗಳ ಆರಂಭವಾಗಿತ್ತು. ಗಲಾಟೆ ತಾರಕಕ್ಕೇರಿದ ವೇಳೆ ಆರೋಪಿ ವೈಯರ್ನಿಂದ ಯುವತಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



