ಬೆಂಗಳೂರು: ಟ್ಯೂಷನ್‌ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ ಹಣಕ್ಕಾಗಿ ಅಪಹರಿಸಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಬ್ಬರ ಕಾಲಿಗೆ ಗುಂಡುಹಾರಿಸಿ ಅರೆಸ್ಟ್ ಮಾಡಲಾಗಿದೆ.
ಗುರುಮೂರ್ತಿ ಮತ್ತು ಗೋಪಾಲ್ ಕೃಷ್ಣ ಬಂಧಿತರು. ಪ್ರಕರಣ ಸಂಬಂಧ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು, ಆರೋಪಿಗಳಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದು ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಕಗ್ಗಲಿಪುರ ರಸ್ತೆಯಲ್ಲಿ ಬಂಧಿಸಲು ಹೋದಾಗ, ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ.
ಹೀಗಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ಕೊಟ್ಟಿದ್ದಾರೆ. ಆದಾಗ್ಯೂ ಮತ್ತೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹೀಗಾಗಿ ಆತ್ಮರಕ್ಷಣೆಗಾಗಿ ಒಟ್ಟಾರೆ 6 ರೌಂಡ್ಸ್ ಗುಂಡು ಹಾರಿಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹುಳಿಮಾವು ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್ ಐ ಅರವಿಂದ ಕುಮಾರ್ ಪೈರಿಂಗ್ ನಡೆದಿದೆ. ಗಾಯಾಳು ಆರೋಪಿಗಳಿಬ್ಬರು ಚಿಕಿತ್ಸೆಗೆ ಜಯನಗರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.