ಬ್ರಹ್ಮಗಂಟು ಸೀರಿಯಲ್ ಮೂಲಕ ಖ್ಯಾತಿ ಪಡೆದಿದ್ದ ನಟಿ ಶೋಭಿತಾ ಶಿವಣ್ಣ ಅವರು ಸೂಸೈಡ್ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ಜರುಗಿದೆ.
Advertisement
ನಟಿ ಶೋಭಿತಾ ಶಿವಣ್ಣ ಅವರು ಮೇ 22 2023ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಬಳಿಕ ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇಧಿಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.
ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ನಗು ನಗುತ್ತಾ ಇರೋ ಚೆಂದದ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ಆ ನಂತರ ಈ ಘಟನೆ ಜರುಗಿದ್ದು, ಅವರ ಆತ್ಮಹತ್ಯೆಯ ಬಗ್ಗೆ ಕಾರಣ ತಿಳಿದು ಬಂದಿಲ್ಲ.
ಇನ್ನೂ ಮಧ್ಯರಾತ್ರಿ ಶೋಭಿತಾ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಶಾಕಿಂಗ್ ಸುದ್ದಿ ತಿಳಿದ ಶೋಭಿತಾ ಕುಟುಂಬ ಸದಸ್ಯರು ಹೈದರಾಬಾದ್‌ಗೆ ತೆರಳುತ್ತಿದ್ದಾರೆ.