ಆನೇಕಲ್:- ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಕಂದಕಕ್ಕೆ ಬಿಎಂಟಿಸಿ ಬಸ್ ನುಗ್ಗಿದ ಘಟನೆ ಜರುಗಿದೆ.
Advertisement
ಪ್ರಯಾಣಿಕರಿದ್ದಾಗಲೇ ಈ ಅವಘಡ ಸಂಭವಿಸಿದೆ. ಬಸ್ ನ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದೆ. ಘಟನೆಯಲ್ಲಿ ಪ್ರಯಾಣಿಕರು ಸೇಫ್ ಆಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ. ಜಿಗಣಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ಇದಾಗಿದ್ದು, ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.