ಜೈಪುರ:- ರಾಜಸ್ಥಾನ ರಾಜ್ಯದ ಜೈಸಲ್ಮೇರ್–ಜೋಧಪುರ ಹೆದ್ದಾರಿಯಲ್ಲಿ ಭಯಾನಕ ದುರಂತ ನಡೆದಿದೆ.
ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 15 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಒಟ್ಟು 57 ಮಂದಿ ಪ್ರಯಾಣಿಕರು ಬಸ್‌ನಲ್ಲಿ ಇದ್ದರು.
ಬೆಂಕಿ ಕ್ಷಣಾರ್ಧದಲ್ಲೇ ಇಡೀ ಬಸ್‌ಗೆ ವ್ಯಾಪಿಸಿದ್ದು, ಹಲವರು ಹೊರಬರಲು ಸಾಧ್ಯವಾಗಲಿಲ್ಲ.
ಈ ದುರ್ಘಟನೆಯಲ್ಲಿ 16 ಮಂದಿ ಗಂಭೀರವಾಗಿ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಎರಡು ಮಕ್ಕಳು ಮತ್ತು ನಾಲ್ಕು ಮಹಿಳೆಯರು ಸೇರಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜೋಧಪುರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬೆಂಕಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ್ದಿರಬಹುದು ಎಂದು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ನಿಖರ ಕಾರಣವನ್ನು ತನಿಖೆ ಬಳಿಕವೇ ತಿಳಿಯಲಿದೆ.
ಬೆಂಕಿಯಲ್ಲಿ ಧಗಧಗಿಸುತ್ತಿರುವ ಬಸ್‌ನ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.