HomeKarnataka NewsBreaking News: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ!

Breaking News: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ!

For Dai;y Updates Join Our whatsapp Group

Spread the love

ಬೆಂಗಳೂರು:- ಮಹಿಳೆ ಮೇಲಿನ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರನ್ನು ಅಕ್ಟೋಬರ್‌ 5ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು.

ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್​ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ ಅಳಲು ತೋಡಿಕೊಂಡರು. ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೆಲ್ಲ ಶುರುವಾಗಿದೆ.

ಐದು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಿಸಿದ್ದಾರೆ. ಆಕೆ ಮೊದಲೇ ಕೊಡಬಹುದಿತ್ತಲ್ಲವೇ? ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾದವನು, ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿದೆ.

ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ ಎಂದು ಮುನಿರತ್ನ ಅಲವತ್ತುಕೊಂಡರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!