ಬೆಂಗಳೂರು:- ಸೆಂಟ್ರಲ್ ಸಿಲ್ಕ್ ಬೋರ್ಡ್ ಬಸ್ ನಿಲ್ದಾಣದ ಬಳಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದು ವೃದ್ಧೆ ಸಾವಿಗೀಡಾಗಿರುವ ಘಟನೆ ಜರುಗಿದೆ.
Advertisement
ಮೃತ ವೃದ್ಧೆಯು ಸುಮಾರು 62 ವರ್ಷ ವಯಸ್ಸಿನವರಾಗಿದ್ದಾರೆ. ರಿವರ್ಸ್ ತೆಗೆಯುವಾಗ ಬಸ್ ಹಿಂಬದಿಯಿಂದ ರಸ್ತೆ ದಾಟುತಿದ್ದ ವೃದ್ಧೆಗೆ ಡಿಕ್ಕಿಯಾಗಿದೆ. ಪರಿಣಾಮ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಬಿಎಂಟಿಸಿಯ ಹಿರಿಯ ಅಧಿಕಾರಿಗಳು ಹಾಗೂ ಟಾಟಾ ಸ್ಮಾರ್ಟ್ ಲಿಮಿಟೆಡ್ ಕಂಪನಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಮಡಿವಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.