ಬೆಂಗಳೂರು:- ಬೆಂಗಳೂರಿನ ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿಯನ್ನು ನಿಕ್ಷೇಪ್ (26) ಎಂದು ಗುರುತಿಸಲಾಗಿದೆ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದು, ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅಪಾರ್ಟ್‌ಮೆಂಟ್‌ನ 16ನೇ ಮಹಡಿಗೆ ಬಂದು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.



