ರಾಜಸ್ಥಾನ:- ಇಲ್ಲಿನ ಬಾರ್ಮರ್ನಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ಜರುಗಿದೆ.
ಯುವಕನೊಬ್ಬನನ್ನು ಅಮಾನುಷವಾಗಿ ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಮನಕಲಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವ್ಯಕ್ತಿಯನ್ನು ಬಟ್ಟೆಬಿಚ್ಚಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ, ನಂತರ ಬಾಟಲಿಯಿಂದ ಮೂತ್ರವನ್ನು ಕುಡಿಯಲು ಒತ್ತಾಯಿಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಬಾರ್ಮರ್ ಜಿಲ್ಲೆಯ ಚೋಹ್ತಾನ್ ಪ್ರದೇಶದ ಧನೌ ಪೊಲೀಸ್ ಠಾಣೆ ವ್ಯಾಪ್ತಿಯ ಬಮ್ನೋರ್ ಗ್ರಾಮದಲ್ಲಿ ನಡೆದಿದೆ.
ಈ ವ್ಯಕ್ತಿ ರಾತ್ರಿ ವೇಳೆ ಯಾರದೋ ಮನೆಗೆ ನುಗ್ಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.



