ಬೆಂಗಳೂರು:- ಕಿಲ್ಲರ್ ಬಿಎಂಟಿಸಿಗೆ ಮತ್ತೋರ್ವ ಯುವಕ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಪೀಣ್ಯ ಸೆಕೆಂಡ್ ಸ್ಟೇಜ್ ಬಳಿ ಜರುಗಿದೆ.
Advertisement
ದೇವರಾಜ್ ಮೃತ ಯುವಕ. ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇಂದು ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ.
ಘಟನೆ ಸಂಬಂದ ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ದಿನೇ ದಿನೇ ಬಿಎಂಟಿಸಿ ಬಸ್‌ಗೆ ಬಲಿಯಾಗುತ್ತಿರುವವರರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಸಿಟಿ ಮಂದಿಯಲ್ಲಿ ಆತಂಕ ಹೆಚ್ಚಿಸಿದೆ.