ಬೆಂಗಳೂರು:- ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸಾಲು ಮರದ ತಿಮ್ಮಕ್ಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
Advertisement
ಸೂಕ್ತ ಚಿಕಿತ್ಸೆಗಾಗಿ ಜಯನಗರದ ಅಪೋಲೊ ಆಸ್ಪ್ರತೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಮಗ ಉಮೇಶ್ ಮಾತನಾಡಿ, ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸುಧಾರಿಸಿದೆ. ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್ ಮಾಡಲಿದ್ದೇವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದರು.
ಇನ್ನೂ ಈ ಹಿಂದೆ ಕೂಡ ಸಾಲು ಮರದ ತಿಮ್ಮಕ್ಕ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅದಕ್ಕೂ ಮುನ್ನ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದಿದ್ದಾರೆ.