ಚಿಕ್ಕಮಗಳೂರು: ಅಬ್ಬಿನಹೊಳಲು ಗ್ರಾಮದ ಸೇತುವೆ ಕುಸಿತ, 6 ಹಳ್ಳಿಗಳ ಸಂಪರ್ಕ ಕಡಿತ!

0
Spread the love

ಚಿಕ್ಕಮಗಳೂರು:- ಸೇತುವೆ ಕುಸಿದು 6 ಹಳ್ಳಿಗಳ ಸಂಪರ್ಕ ಕಡಿತಗೊಂಡ ಘಟನೆ ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದಲ್ಲಿ ಜರುಗಿದೆ.

Advertisement

ಭದ್ರಾ ಮೇಲ್ದಂಡೆ ಯೋಜನೆಯ ನೀರಿನ ರಭಸಕ್ಕೆ ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದ ಸೇತುವೆ ಮುರಿದು ಬಿದ್ದಿದೆ. ಪರಿಣಾಮ ಐದಾರು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.

ಈ ಸೇತುವೆ ಬಹಳ ಹಳೆಯ ಸೇತುವೆಯಾಗಿದೆ. ಸೇತುವೆ ಬಗ್ಗೆ ಗಮನ ಹರಿಸದೆ ಇಂಜಿನಿಯರ್‌ಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರು ಹರಿಸುತ್ತಿದ್ದಾರೆ. ಪರಿಣಾಮ ಜನರು ಪರದಾಡುವಂತಾಗಿದೆ ಎಂದು ಗ್ರಾಮಗಳ ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮಕ್ಕಳು ಶಾಲಾ-ಕಾಲೇಜಿಗೆ ಹೋಗಲು ಸಾಧ್ಯವಾಗದೆ, ರೈತರು ಹೊಲ-ಗದ್ದೆ, ತೋಟ, ಮನೆಗಳಿಗೆ ಹೋಗಿ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಸ್ಥಳಕ್ಕೆ ಭೇಟಿ ಕೊಟ್ಟು ಒಂದು ವರ್ಷ ತುಂಬಿಲ್ಲ. ಈಗಲೇ ಇಂತಹ ಅನಾಹುತ ನಡೆದಿದೆ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here