HomeGadag Newsಕಳೆದುಹೋದ ಮೊಬೈಲ್‌ಗಳಿಗೆ ಮರುಜೀವ: 769 ಫೋನ್‌ಗಳನ್ನು ಪತ್ತೆಹಚ್ಚಿದ ಪೊಲೀಸ್ ಇಲಾಖೆ!

ಕಳೆದುಹೋದ ಮೊಬೈಲ್‌ಗಳಿಗೆ ಮರುಜೀವ: 769 ಫೋನ್‌ಗಳನ್ನು ಪತ್ತೆಹಚ್ಚಿದ ಪೊಲೀಸ್ ಇಲಾಖೆ!

For Dai;y Updates Join Our whatsapp Group

Spread the love

ಗದಗ: ಜಿಲ್ಲಾ ಪೊಲೀಸ್ ಇಲಾಖೆಯು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ಕಳೆದುಹೋಗಿದ್ದ ಹಾಗೂ ಕಳ್ಳತನವಾಗಿದ್ದ 1.13 ಕೋಟಿ ರೂ. ಮೌಲ್ಯದ 769 ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.

ಮಂಗಳವಾರ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ ಜಗದೀಶ ಅವರು, 2026ರ ಜನವರಿ 1ರಿಂದ ಕಳೆದ ಕೇವಲ ನಾಲ್ಕು ತಿಂಗಳಲ್ಲಿ ಈ ಬೃಹತ್ ಪ್ರಮಾಣದ ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದರು.

ಫೆಬ್ರವರಿ 2023ರಲ್ಲಿ ಸಿ.ಇ.ಐ.ಆರ್ (Central Equipment Identity Register) ಜಾರಿಗೆ ಬಂದಾಗಿನಿಂದ ಈವರೆಗೆ ಒಟ್ಟು 5,546 ಮೊಬೈಲ್‌ಗಳನ್ನು ಬ್ಲಾಕ್ ಮಾಡಲಾಗಿದೆ. ಈ ಪೈಕಿ 3,251 ಮೊಬೈಲ್‌ಗಳು ಪತ್ತೆಯಾಗಿದ್ದು, ಈಗಾಗಲೇ 2,295 ಮೊಬೈಲ್‌ಗಳನ್ನು ಮಾಲೀಕರಿಗೆ ಮರಳಿಸಲಾಗಿದೆ ಎಂದು ಅವರು ಹೇಳಿದರು.

ಪತ್ತೆಯಾದ 769 ಮೊಬೈಲ್‌ಗಳಲ್ಲಿ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿವೆ. ರೋಣದಲ್ಲಿ 166, ಗದಗ ಶಹರದಲ್ಲಿ 131, ಮುಂಡರಗಿಯಲ್ಲಿ 109, ಗದಗ ಗ್ರಾಮೀಣ ಹಾಗೂ ಲಕ್ಷ್ಮೇಶ್ವರದಲ್ಲಿ ತಲಾ 83, ಗಜೇಂದ್ರಗಡದಲ್ಲಿ 53, ಬಡಾವಣೆ ಠಾಣೆಯಲ್ಲಿ 46, ನರಗುಂದದಲ್ಲಿ 41, ಸಿ.ಇ.ಎನ್ ವಿಭಾಗದಲ್ಲಿ 17, ಮುಳಗುಂದದಲ್ಲಿ 14, ನರೇಗಲ್‌ನಲ್ಲಿ 13, ಬೆಟಗೇರಿಯಲ್ಲಿ 8 ಹಾಗೂ ಶಿರಹಟ್ಟಿ ಠಾಣೆಯಲ್ಲಿ 5 ಮೊಬೈಲ್‌ಗಳನ್ನು ಪತ್ತೆ ಮಾಡಲಾಗಿದೆ ಎಂದು ವಿವರಿಸಿದರು.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಡಿಎಸ್‌ಪಿಗಳಾದ ಎಂ.ಐ. ಸಜ್ಜನ, ಮುರ್ತುಜಾ ಖಾದ್ರಿ, ಪ್ರಭುಗೌಡ ಕಿರೇದಹಳ್ಳಿ ಹಾಗೂ ಜಿಲ್ಲೆಯ ವಿವಿಧ ಠಾಣೆಗಳ ಸಿಪಿಐಗಳು, ಪಿಎಸ್‌ಐಗಳು ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಕರ್ತವ್ಯದಕ್ಷತೆ ಮೆರೆದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಎಸ್ಪಿ ರೋಹನ ಜಗದೀಶ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!