ಬೆಳಗಾವಿ: ಅಂತಾರಾಷ್ಟ್ರೀಯ ಪ್ಯಾರಾ ಏಷ್ಯನ್ ಗೇಮ್ಸ್ನ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಸ್ವಾತಿಕ್ ಪಾಟೀಲ್ ಕಂಚಿನ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿದ್ದಾರೆ.
100 ಮೀಟರ್ ಈಜು ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಅವರು, 1 ನಿಮಿಷ 13.77 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಮುತಗಾ ಗ್ರಾಮದವರಾದ ಸ್ವಾತಿಕ್ ಪಾಟೀಲ್, ತಮ್ಮ ಸಾಧನೆಯ ಮೂಲಕ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆ ತಂದಿದ್ದಾರೆ. ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಅವರು, ಕೆಲಸದ ಒತ್ತಡದ ನಡುವೆಯೂ ಈಜು ಅಭ್ಯಾಸವನ್ನು ಮುಂದುವರಿಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವುದು ವಿಶೇಷ.
ವೃತ್ತಿ ಮತ್ತು ಕ್ರೀಡೆಯನ್ನು ಸಮತೋಲನದಿಂದ ನಿಭಾಯಿಸಿ ಸಾಧನೆ ಮಾಡಿರುವ ಸ್ವಾತಿಕ್ ಅವರ ಯಶಸ್ಸು ಯುವಜನತೆಗೆ ಪ್ರೇರಣೆಯಾಗಿದೆ. ಅವರ ಕಂಚಿನ ಪದಕದ ಸಾಧನೆಗೆ ಕ್ರೀಡಾಭಿಮಾನಿಗಳು ಹಾಗೂ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.










