ಗುಜರಾತ್:-ಸ್ವಂತ ತಂಗಿಯ ಮೇಲೆ ಅಣ್ಣನೊಬ್ಬ ಅತ್ಯಾಚಾರವೆಸಗಿ, ಗರ್ಭವತಿಯನ್ನಾಗಿಸಿದ ಘಟನೆ
ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ಜರುಗಿದೆ.
13 ವರ್ಷದ ತಂಗಿ ಮೇಲೆ ಅಣ್ಣನೇ ರೇಪ್ ಮಾಡಿದ್ದು, ಆಕೆ ಈಗ ಗರ್ಭಿಣಿ ಆಗಿದ್ದಾಳೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ.
ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ. ಬಾಲಕಿ ನಿರಾಕರಿಸಿದಾಗ ಆತ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿ, ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಘಟನೆ ಬಳಿಕ ಬಾಲಕಿಯ ತಾಯಿ ಸೆ.30ರಂದು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಲೀಸರ ಪ್ರಕಾರ, ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಡುತ್ತಿದ್ದರು ಮತ್ತು ಅವರ ಇಬ್ಬರೂ ಮಕ್ಕಳು ಮನೆಯಲ್ಲಿ ಇರುತ್ತಿದ್ದರು.
8 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ, ಶಾಲೆಯಲ್ಲಿ ಹೊಟ್ಟೆ ನೋವೆಂದು ಒದ್ದಾಡಿದ್ದಳು, ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದರು. ಆಗ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.