ಬೆಂಗಳೂರು:- ವಿದ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಗಳು ಹಾಡಹಗಲೇ ಕತ್ತು ಕೊಯ್ದು ಹತ್ಯೆ ಮಾಡಿದ ಘಟನೆ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿಯಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಯುವತಿಯ ವಯಸ್ಸು ಸುಮಾರು 20–22 ವರ್ಷಗಳಷ್ಟಿದ್ದು, ಕಾಲೇಜು ವಿದ್ಯಾರ್ಥಿನಿಯಾಗಿರಬಹುದು ಎಂದು ಶಂಕಿಸಲಾಗಿದೆ. ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
ಘಟನೆ ಬೆಳಗಿನ ಸಮಯದಲ್ಲಿ ನಡೆದಿದ್ದು, ಸ್ಥಳೀಯರು ಟ್ರ್ಯಾಕ್ ಹತ್ತಿರ ರಕ್ತದ ಮಡುವಿನಲ್ಲಿ ಯುವತಿಯ ಶವ ಪತ್ತೆಹಚ್ಚಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಾಮಪುರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಶವವನ್ನು ಪೋಸ್ಟ್‌ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಕತ್ತು ಮೇಲೆ ತೀವ್ರ ಗಾಯದ ಗುರುತುಗಳು ಕಂಡುಬಂದಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಸಾಕ್ಷ್ಯಾಧಾರಗಳ ಆಧಾರದಲ್ಲಿ ತನಿಖೆ ಆರಂಭಿಸಿದ್ದಾರೆ. ಪ್ರೇಮ ವೈಫಲ್ಯ ಅಥವಾ ವೈಯಕ್ತಿಕ ಶತ್ರುತೆಯ ಹಿನ್ನೆಲೆ ಇರಬಹುದೆಂಬ ಅನುಮಾನವೂ ವ್ಯಕ್ತವಾಗಿದೆ. ಘಟನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರದೇಶದ ಜನರಲ್ಲಿ ಆತಂಕ ಮೂಡಿದೆ