ಬೆಂಗಳೂರು:- ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಘೋಷಣೆ ಮಾಡಲಾಗಿದೆ.
Advertisement
ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಎಕ್ಸ್ನಲ್ಲಿ ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.
ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ.
ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.