ಬಾಗಲಕೋಟ:– ಬಲ್ಕರ್ ಗಾಡಿ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ಜರುಗಿದೆ.
ಸಿಮೆಂಟ್ ತುಂಬಿರೋ ಬಲ್ಕರ್ ಗಾಡಿ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆತಕ್ಕೆ ಗಾಡಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ಬಳಿಕ ಗಾಡಿ ಒಳಗೆ ನಾಲ್ವರು ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬದುಕುಳಿದಿರುವ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಚಾಲಕನ ಅಜಾಗರೂಕ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಸ್ಥಳಕ್ಕೆ ಎಸ್ಪಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದು, ಘಟನೆ ಬಳಿಕ ಕೆಲಕಾಲ ಟ್ರಾಫಿಕ್ ಉಂಟಾಗಿತ್ತು. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



