ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟ್ರಾನ್ಸ್‌ಫಾರ್ಮರ್! ತಪ್ಪಿದ ದುರಂತ!

0
Spread the love

ಬೆಂಗಳೂರು:- ಶಾರ್ಟ್ ಸರ್ಕ್ಯೂಟ್ ನಿಂದ ಟ್ರಾನ್ಸ್‌ಫಾರ್ಮರ್ ಹೊತ್ತಿ ಉರಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಮಧ್ಯರಾತ್ರಿ 12:20ರ ಸುಮಾರಿಗೆ ಜರುಗಿದೆ.

Advertisement

ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಹೋಟೆಲ್ ಎಂಪೈರ್ ಬಳಿಯ ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಕ್ರಮ ಕೈಗೊಂಡು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಮಳೆ ಆದ ಕಾರಣ ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಕಾಣಿಸಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here