ಬಸ್-ಆಟೋ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

0
Spread the love

ಕಲಬುರಗಿ:  ಆಟೋ ಮತ್ತು ಕೆಕೆಆರ್‌ಟಿಸಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಅಪ್ಪಚಿಯಾಗಿ ಮೃತಪಟ್ಟಿದ್ದಾರೆ.  ಕಲಬುರಗಿಯ ಸೆಂಟ್ರೆಲ್ ಜೈಲ್ ಬಳಿ ಘಟನೆ ನಡೆದಿದೆ. ಸರ್ಕಾರಿ ಬಸ್‌ ರಾಯಚೂರಿನಿಂದ ಕಲಬುರಗಿ ಕಡೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

Advertisement

ಅಪಘಾತದಲ್ಲಿ ಮೃತರ ಗುರುತು ಸಿಗದಷ್ಟು ಗಂಭೀರ ಗಾಯಗವಾಗಿದೆ. ಪೊಲೀಸರು ಗುರುತು ಪತ್ತೆಗೆ ಹರಸಾಹಸ ಪಡುತ್ತಿದ್ದಾರೆ. ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here