ಬೆಂಗಳೂರು: ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ. ಯುವತಿ ತನ್ನ ಮೊಬೈಲ್ ಚಾರ್ಜ್ಗೆ ಇಟ್ಟಿದ್ದಾಗ, ಯುವತಿಯ ಮೊಬೈಲ್ ಕಸಿದುಕೊಂಡು ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ..
“ಮುತ್ತು ಕೊಟ್ಟರೆ ಮಾತ್ರ ಫೋನ್ ಕೊಡುತ್ತೇನೆ” ಎಂದು ಸಿಬ್ಬಂದಿ ಅವಾಚ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಡ್ರೈವರ್ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಘಟನೆಯಿಂದ ಆಘಾತಗೊಂಡ ಯುವತಿ, ಮೊಬೈಲ್ ವಾಪಸ್ ಪಡೆದ ಬಳಿಕ ತನ್ನ ಕುಟುಂಬಸ್ಥರಿಗೆ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕೋಪಗೊಂಡ ಯುವತಿಯ ಕುಟುಂಬಸ್ಥರು ಚಾಲುಕ್ಯ ಸರ್ಕಲ್ ಬಳಿ ಬಸ್ ಅಡ್ಡಗಟ್ಟಿ ನಿಲ್ಲಿಸಿದ್ದಾರೆ.
ಬಳಿಕ ಆರೋಪಿಗಳಾದ ಕಂಡಕ್ಟರ್ ಮತ್ತು ಡ್ರೈವರ್ಗಳನ್ನ ಹೊರಗೆಳೆದು ಬಟ್ಟೆ ಬಿಚ್ಚಿ ಥಳಿಸಿದ್ದಾರೆ. ಬಳಿಕ ಇಬ್ಬರನ್ನೂ ವಿಧಾನ ಸೌಧ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೀಫ್ ಮತ್ತು ಡ್ರೈವರ್ನನ್ನು ವಶಕ್ಕೆ ಪಡೆದು ವಿಧಾನಸೌಧ ಠಾಣೆಗೆ ಕರೆದೊಯ್ದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.