ಹೈದರಾಬಾದ್​ʼನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ʼ​ಗೆ ಬೆಂಕಿ: 20ಕ್ಕೂ ಹೆಚ್ಚು ಮಂದಿ ಸಜೀವ ದಹನ

0
Spread the love

ಕರ್ನೂಲ್: ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾವೇರಿ ಟ್ರಾವೆಲ್ಸ್ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡು, ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಇಂದು ನಸುಕಿನ ಜಾವ ಎಸಿ ಸ್ಲೀಪರ್ ಬಸ್ ಹೊತ್ತಿ ಉರಿದು 20ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

Advertisement

ಶುಕ್ರವಾರ ಬಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ಬಂದ ಬೈಕ್‌ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.  ಡಿಕ್ಕಿ ಹೊಡೆದ ನಂತರ ಬೈಕ್‌ ಬಸ್ಸಿನ ಕೆಳಗಡೆಯಿಂದ ಮುಂದಕ್ಕೆ ಹೋಗಿ ಇಂಧನ ಟ್ಯಾಂಕ್‌ಗೆ ಬಡಿದಿದೆ. ಹಿಂಭಾಗದಲ್ಲಿರುವ ಇಂಧನ ಟ್ಯಾಂಕ್‌ಗೆ ಬೈಕ್‌ ಡಿಕ್ಕಿ ಬಡಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದೆ.

ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದವು.  ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಈಗ ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ.

ಸ್ಲೀಪರ್‌ ಕೋಚ್‌ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್‌ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here