ರುದ್ರಪ್ರಯಾಗ: ಬಸ್ ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಬಿದ್ದಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಇದರ ಪರಿಣಾಮ 18 ಪ್ರಯಾಣಿಕರಿದ್ದ ಬಸ್ ಬಿದ್ದು ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ನಂತರ ಸ್ಥಳದಲ್ಲಿ ಅವ್ಯವಸ್ಥೆ ಉಂಟಾಗಿದೆ. ಏಳು ಜನರನ್ನು ರಕ್ಷಿಸಲಾಗಿದ್ದು ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ನಾಪತ್ತೆಯಾದವರ ಪತ್ತೆ ಕಾರ್ಯ ನಡೆಸುತ್ತಿದೆ.
ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ಸು ಬಿದ್ದಿದೆ. ಕೆಲವು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಿಂದ ಸಾವು ನೋವು ಕಡಿಮೆಯಾಗಿದೆ. ಮಾಹಿತಿಯ ಪ್ರಕಾರ, ಈ ಅಪಘಾತ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.



